Connect with us

    LATEST NEWS

    ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಸಾಯುವ ತನಕ ಜೈಲು

    ಉಡುಪಿ ಅಗಸ್ಟ್ 09: ಬಂಗಾಳ ಮೂಲಕ ಕೂಲಿಕಾರ್ಮಿಕರ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಪೋಕ್ಸೊ ನ್ಯಾಯಾಲಯವು ಸಾಯುವ ತನಕ ಜೈಲು ಶಿಕ್ಷೆ ವಿಧಿಸಿದೆ.
    ಬಂಗಾಳ ಮೂಲದ ಕೂಲಿಕಾರ್ಮಿಕ ಮುಫಿಜುಲ್ ಎಸ್.ಕೆ.(23) ಶಿಕ್ಷೆಗೆ ಗುರಿಯಾದ ವ್ಯಕ್ತಿ.


    ಈತ ಪಡುಬಿದ್ರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಲು ಈತ ಬಂದಿದ್ದ. ಇದೇ ಕಟ್ಟಡದ ಕೆಲಸಕ್ಕೆ ಬಂಗಾಳ ಮೂಲದ ಕೂಲಿ ಕಾರ್ಮಿಕರ ಕುಟುಂಬವೊಂದು ಬಂದಿತ್ತು. ಆರೋಪಿ ನೊಂದ ಬಾಲಕಿಯ ತಂದೆತಾಯಿ ಇಲ್ಲದ ವೇಳೆ ಮನೆಗೆ ನುಗ್ಗಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ, ಈ ವೇಳೆ ಬಾಲಕಿ ಅಳಲು ಪ್ರಾರಂಭಿಸಿದಾಗ ಸ್ಥಳದಿಂದ ಪರಾರಿಯಾಗಿದ್ದ, ಬಾಲಕಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದು ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅತ್ಯಾಚಾರ ನಡೆಸಿರುವುದು ತಿಳಿದು ಬಂದಿತ್ತು. ಅದರಂತೆ ತನಿಖೆ ಕೈಗೊಂಡ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್‌ ಪೂವಯ್ಯ ಕೆ.ಸಿ. ಅವರು ಆರೋಪಿಯ ವಿರುದ್ಧ ದೋಷಾರೋಣೆ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 17 ಸಾಕ್ಷಿಗಳ ವಿಚಾರಣೆ ಮಾಡಲಾಗಿತ್ತು.

    ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯ ಮತ್ತು ಇತರ ಸಾಕ್ಷಿಗಳನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯು ತಪ್ಪಿತಸ್ಥ ಎಂದು ಮನಗೊಂಡು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಅವರು ವಾದ ಮಂಡಿಸಿದ್ದರು. ಅಪರಾಧಿಗೆ ಒಟ್ಟು ₹20 ಸಾವಿರ ದಂಡ ವಿಧಿಸಿದ್ದು, ಸರ್ಕಾರದಿಂದ ನೊಂದ ಬಾಲಕಿಗೆ ₹3 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply