Connect with us

    KARNATAKA

    ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳ ಅರೆಸ್ಟ್….!!

    ಚಿತ್ರದುರ್ಗ ಸೆಪ್ಟೆಂಬರ್ 1: ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.


    ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

    ತಮ್ಮದೇ ಮಠದ ಅಧೀನದಲ್ಲಿರುವ ಹಾಸ್ಟೆಲ್ ನಲ್ಲಿರುವ ಅಪ್ರಾಪ್ತ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಹಿನ್ನಲೆ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು, ಈ ಪ್ರಕರಣದಲ್ಲಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಇಂದು ಮುರುಘಾ ಶ್ರೀ ಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply