LATEST NEWS
ಕದ್ರಿ ಕ್ಷೇತ್ರದ ಅರ್ಚಕನ ವಿರುದ್ಧ ಪೋಕ್ಸೋ ಕೇಸ್..! ಕೆಲಸದಿಂದ ವಜಾ
ಮಂಗಳೂರು ಡಿಸೆಂಬರ್ 05: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾಗಿದ್ದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯನನ್ನು ಅಮಾನತು ಗೊಳಿಸಲಾಗಿದೆ.
ಅರ್ಚಕರ ಮೇಲೆ 2021ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ಇತ್ತೀಚೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣಕ್ಕೆ ಈತನ ಮೇಲೆ ಪೋಕ್ಸೋ ಕೇಸ್ ದಾಖಲಾಗಿ ಸದ್ಯ ಕೆಲಸದಿಂದ ಅಮಾನತು ಕೂಡಾ ಆಗಿದ್ದಾನೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.