Connect with us

    LATEST NEWS

    ಕುಂದಾಪುರ – ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಬ್ಲಾಕ್ ಮೇಲ್ – ಕೇಸ್ ಆಗುತ್ತಿದ್ದಂತೆ ಎಸ್ಕೇಪ್ ಆದ ಶ್ರೇಯಸ್ ನಾಯ್ಕ್

    ಕುಂದಾಪುರ ಜೂನ್ 02: ಹಾಸನದಲ್ಲಿ ನಡೆದ ಪ್ರಜ್ವಲ್ ರೇವಣ್ಣ ರೀತಿಯ ಪ್ರಕರಣವೊಂದು ಕುಂದಾಪುರದಲ್ಲಿ ನಡೆದಿದ್ದು, ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.


    ಅಪ್ರಾಪ್ತ ಬಾಲಕಿಯನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲಿನಲ್ಲಿ ನಡೆದಿದೆ. ಶ್ರೇಯಸ್ ನಾಯ್ಕ್(25) ತಲೆಮರೆಸಿಕೊಂಡಿರುವ ಆರೋಪಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಹಾಲಾಡಿಯ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನಂದು ಆರೋಪಿಸಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಆರೋಪಿ. ಸದ್ಯ ಪ್ರಕರಣ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *