Connect with us

    KARNATAKA

    ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ಇನ್ನಿಲ್ಲ

    ಧಾರವಾಡ : ಕನ್ನಡದ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ನಿಧನರಾಗಿದ್ದಾರೆ. ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


    ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆ ಈ ಹಿಂದೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿತ್ತು. ಆ ಬಳಿಕ ಅವರ ಆರೋಗ್ಯ ಸ್ಥಿತಿ ಸುಧಾರಿಸಲಿಲ್ಲ. ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿತ್ತು. ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡಿತ್ತು.

    ಸುಮಾರು ಒಂದು ತಿಂಗಳಿನಿಂದ ಎಸ್​ಡಿಎಂ ಆಸ್ಪತ್ರೆಯಲ್ಲಿ ಕಣವಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಮತ್ತೆ ಆರೋಗ್ಯ ಕ್ಷೀಣಿಸಿತ್ತು. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು. ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ್ದ ಚನ್ನವೀರ ಕಣವಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

    ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ 1949ರಲ್ಲಿ ಬಿಡುಗಡೆಯಾಗಿತ್ತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply