Connect with us

    BELTHANGADI

    ವಿಷ ಸೇವಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಬೆಳ್ತಂಗಡಿ ಜನವರಿ 03: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


    ಮೃತರನ್ನು ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಎಂದು ಗುರುತಿಸಲಾಗಿದೆ. ಇವರು ಡಿಸೆಂಬರ್ 27 ರಂದು ವಿಷ ಸೇವಿಸಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

    Share Information
    Advertisement
    Click to comment

    Leave a Reply

    Your email address will not be published. Required fields are marked *