BELTHANGADI
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೇ ಸಾವು…!!
ಬೆಳ್ತಂಗಡಿ ಎಪ್ರಿಲ್ 23: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ ಪುತ್ರಿ 26 ವರ್ಷದ ಕೌಶಲ್ಯ ಎಂದು ಗುರುತಿಸಲಾಗಿದೆ.
ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿಯೊಬ್ಬರ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login