LATEST NEWS
ಸಿಎಂ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಟೆಂಪೋ….!!

ಮಂಗಳೂರು ಎಪ್ರಿಲ್ 13: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರನ್ನು ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಹೆಗಡೆ.ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ ಢಿಕ್ಕಿ ಹೊಡೆದಿದೆ. ತಲೆ ಹಾಗು ಕೈಗಳಿಗೆ ಗಾಯಗೊಂಡ ಪೇದೆಯನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.
