Connect with us

    LATEST NEWS

    ಫ್ಲಾಟ್ ನಲ್ಲಿ ನಡೆಸುತ್ತಿದ್ದ ಅಕ್ರಮ ಜೂಜಾಟ ಅಡ್ಡೆಗೆ ದಾಳಿ 11 ಮಂದಿ ಸೆರೆ

    ಫ್ಲಾಟ್ ನಲ್ಲಿ ನಡೆಸುತ್ತಿದ್ದ ಅಕ್ರಮ ಜೂಜಾಟ ಅಡ್ಡೆಗೆ ದಾಳಿ 11 ಮಂದಿ ಸೆರೆ

    ಮಂಗಳೂರು ಎಪ್ರಿಲ್ 7: ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ಬಳಿಯ ಫ್ಲಾಟ್ ವೊಂದರಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಅಂದರ್ – ಬಾಹರ್ ಆಡುತ್ತಿದ್ದ 11 ಜನರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

    ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ಶಕ್ತಿ ಆಪಾರ್ಟ್ ಮೆಂಟ್ ನ ಫ್ಲಾಟ್ ವೊಂದರಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಭಂಡಾರಿ, ವಿಶ್ವನಾಥ, ಹನೀಫ್, ಮೋಹನ್ ದಾಸ್, ಜರ್ನಾಧನ ಬಾಬು, ಕೃಷ್ಣ ಮೂರ್ತಿ ಐತಾಳ್, ಮಾರ್ಕ್ ಪಿಂಟೋ, ಗೌರಿಶ್, ಪ್ರಶಾಂತ್, ಸಂಶುದ್ದೀನ್, ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 66,070 ರೂಪಾಯಿ ಹಾಗೂ ಮೊಬೈಲ್ ಫೋನ್ ಗಳು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಇಸ್ಪೀಟ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply