Connect with us

LATEST NEWS

10 ಲಕ್ಷ ಮೌಲ್ಯದ ನಿಷೇಧಿತ ಎಂಡಿಎಂಎ ಮಾದಕ ವಸ್ತು ವಶಕ್ಕೆ – ಮೂವರು ಆರೋಪಿಗಳ ಬಂಧನ

ಮಂಗಳೂರು ಜೂನ್ 04: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ 170 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಬಂಧಿತರನ್ನು ಉಪ್ಪಳ ಗೇಟ್ ನಿವಾಸಿಗಳಾದ ಮೊಹಮ್ಮದ್ ಮುನಾಫ್, ಮೊಹಮ್ಮದ್ ಮುಝಾಂಬಿಲ್, ಮತ್ತು ಅಹ್ಮದ್ ಮಸೂಕ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಯೊಬ್ಬರಿಂದ ಡ್ರಗ್ಸ್ ಪಡೆದು ಅದನ್ನು ಮಂಗಳೂರು, ಉಪ್ಪಳ ಮತ್ತು ಕಾಸರಗೋಡಿನ ಪ್ರದೇಶಗಳಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಚರಣೆ ಯಲ್ಲಿ ಕೊಣಾಜೆಯ ಗಣೇಶ್ ಮಹಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಮೊಬೈಲ್ ಪೋನ್, ಕಾರು ಸೇರಿ ಒಟ್ಟು 17,37,000 ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.