LATEST NEWS
ಇರಾ ಗ್ರಾಮಪಂಚಾಯತ್ ಅಧ್ಯಕ್ಷನ ಮೇಲೆ ಹಲ್ಲೆ ಪ್ರಕರಣ ಮೂವರು ಆರೋಪಿಗಳ ಬಂಧನ

ಇರಾ ಗ್ರಾಮಪಂಚಾಯತ್ ಅಧ್ಯಕ್ಷನ ಮೇಲೆ ಹಲ್ಲೆ ಪ್ರಕರಣ ಮೂವರು ಆರೋಪಿಗಳ ಬಂಧನ
ಮಂಗಳೂರು ಡಿಸೆಂಬರ್ 12: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಚಿ ನಿವಾಸಿಗಳಾದ ಬಶಿರ್, ಕಬೀರ್, ತನ್ವಿರ್ ಎಂದು ಗುರುತಿಸಲಾಗಿದೆ. ನವೆಂಬರ್ 30 ರಂದು ಇರಾ ಗ್ರಾಮ ಪಂಚಾಯತಿ ಅಧ್ಯಕ್ಷ ರಜಾಕ್ ರವರ ಮೇಲೆ 3 ಜನ ಹಲ್ಲೆ ನಡೆಸಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಗ್ರಾಮಾಂತರ ಠಾಣಾ ಪೋಲಿಸರು ಬಲೆ ಬೀಸಿದ್ದಾರೆ. ಪ್ರಕರಣ ನಡೆದು 11 ದಿನಗಳ ಬಳಿಕ ಪೋಲೀಸರು ಆರೋಪಿ ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
