Connect with us

LATEST NEWS

ಶರಣ್ ಪಂಪ್ ವೆಲ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ನಾಲ್ವರು ಆರೆಸ್ಟ್

ಮಂಗಳೂರು ಜೂನ್ 2: ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯ ಕಸಬಾದ ಭವಾನಿ ಶಂಕರ್ (32), ಬಜಾಲ್ ನ ನೌಶಾದ್ (27), ಕಾವೂರಿನ ರವಿ ಎಲಿಯಾಸ್ ಟಿಕ್ಕಿ ರವಿ (38), ಮೂಡಿಬಿದಿರೆಯ ಧರೆಗುಡ್ಡೆಯ ಜಯ ಕುಮಾರ್ (33) ಎಂದು ಗುರುತಿಸಲಾಗಿದೆ.

ಬಂಧಿತರು ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿಗೆ ಸಂಬಂಧಿಸಿದಂತೆ ಬಂದ ವಾಟ್ಸಪ್ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ರವಾನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂದೇಶದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.