ಪುತ್ತೂರು : ಶ್ರೀಗಂಧ ಎಣ್ಣೆಯ ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಕಳೆದ 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕೊಲಂಬಾಡಿ ತಾಯಲ್ ಮನೆ ನಿವಾಸಿ ಮೊಹಮ್ಮದ್ ರಫೀಕ್ ಎಂ.ಎಂ(41) ಎಂದು ಗುರುತಿಸಲಾಗಿದೆ.

ಈತ ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ 2 ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡು ಆ ಬಳಿಕ ಕಳೆದ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿಯ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 87, 71 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.