ಮಂಗಳೂರು ಮಾರ್ಚ್ 23: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಳೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ ಇತ್ತು.

ಬಂಧಿತ ಆರೋಪಿಯನ್ನು ಅಜರುದ್ದೀನ್ ಅಲಿಯಾಸ್ ಅಜರ್ ಕೃಷ್ಣಾಪುರ ಎಂದು ಗುರುತಿಸಲಾಗಿದ್ದು, ಈತನ ಮೇಲೆ 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದ್ದು, ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಬಂಧಿಸಲಾಗಿದೆ.