LATEST NEWS
ನಿಷೇಧಾಜ್ಞೆ ಉಲ್ಲಂಘಿಸಿ ಕರಾಳ ದಿನಾಚರಣೆ ಕಾಂಗ್ರೇಸ್ ಕಾರ್ಯಕರ್ತರ ಬಂಧನ
ನಿಷೇಧಾಜ್ಞೆ ಉಲ್ಲಂಘಿಸಿ ಕರಾಳ ದಿನಾಚರಣೆ ಕಾಂಗ್ರೇಸ್ ಕಾರ್ಯಕರ್ತರ ಬಂಧನ
ಉಡುಪಿ ನೆವಂಬರ್ 8: ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಉಡುಪಿಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ನಡುವೆ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕಾಂಗ್ರೇಸ್ ಕರಾಳ ದಿನಾಚರಣೆ ಪ್ರತಿಭಟನೆ ನಡೆಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ಬಸ್ ನಿಲ್ದಾಣ ಸಮೀಪ ನೋಟ್ ಬ್ಯಾನ್ ವಿರೋಧಿಸಿ ಕಾಂಗ್ರೇಸ ಕರಾಳ ದಿನ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ಪ್ರತಿಭಟನೆಯಲ್ಲಿ ಕಾಂಗ್ರೇಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಭಾಗವಹಿಸಿದ್ದರು. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಹಿನ್ನಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಉಲ್ಲಂಘಿಸಿದ ಕಾಂಗ್ರೇಸ್ ಕಾರ್ಯಕರ್ತರನ್ನು ಬಂಧಿಸಿದರು.
ಕಾಂಗ್ರೇಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಸೇರಿದಂತೆ ನೂರಕ್ಕು ಹೆಚ್ಚು ಕಾರ್ಯಕರ್ತರನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದರು.