Connect with us

LATEST NEWS

ಮಂಗಳೂರು – ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ವರ್ತನೆ ಆರೋಪಿ ಅರೆಸ್ಟ್

ಮಂಗಳೂರು ಜೂನ್ 18: ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ಗುಪ್ತಾಂಗವನ್ನು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಬಂಧಿತನನ್ನು ವ್ಯಕ್ತಿಯನ್ನು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನದಲ್ಲಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದು, ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಸ್ತು ನಿರತರಾಗಿದ್ದ ದಕ್ಷಿಣ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ದೇವೇಂದ್ರಪ್ಪ ಅವರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಆರೋಪಿಯು ರಾಜಾಜಿ ಉದ್ಯಾನದ ಮುಖ್ಯ ಗೇಟಿನ ಬಳಿ ಗಾಂಧಿ ಪ್ರತಿಮ ಹತ್ತಿರ ಕಟ್ಟೆಯ ಮೇಲೆ ಕುಳಿತು ಸಾರ್ವಜನಿಕವಾಗಿ ತನ್ನ ಗುಪ್ತಾಂಗವನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ್ದ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *