LATEST NEWS
ಕಾಂಗ್ರೇಸ್ ಮುಖಂಡನ ಬೆಂಬಲಿಗರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರ ಕೊಲೆಗೆ ಸಂಚು
ಕಾಂಗ್ರೇಸ್ ಮುಖಂಡನ ಬೆಂಬಲಿಗರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರ ಕೊಲೆಗೆ ಸಂಚು
ಮಂಗಳೂರು ಮಾರ್ಚ್ 30: ಮುಲ್ಕಿ -ಮೂಡಬಿದಿರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ – ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಅವರ ಕೊಲೆಗೆ ಸಂಚು ನಡೆಸಲಾಗಿತ್ತು ಎಂಬ ಮಾಹಿತಿ ಇದೀಗ ಸುದ್ದಿಯಾಗಿದೆ. ಇತ್ತೀಚೆಗೆ ಮಂಗಳೂರು ಪೊಲೀಸರು ದರೊಡೆ ಪ್ರಕರಣಕ್ಕೆ ಸಂಬಂಧಿಸಿದೆ ಮೂವರು ಆರೋಪಿಗಳನ್ನು ಬಂಧಿಸಿದ್ದರು, ಅವರನ್ನು ತೀವ್ರ ವಿಚಾರಣೆಗೊಳಿಸಿದಾಗಿ ಈ ಮಾಹಿತಿ ಹೊರಬಂದಿದೆ.
ಬಂಧಿತ ಆರೋಪಿಗಳು ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಅವರ ಕೊಲೆಗೆ ಯತ್ನಿಸಿದ್ದಾರೆ. ಆದರೆ ಅದೃಷ್ಠವಶಾತ್ ಈಶ್ವರ್ ಕಟೀಲ್ ಆರೋಪಿಗಳ ಕೈ ಸಿಗದೆ ಪಾರಾಗಿದ್ದರು. ಈ ಮಾಹಿತಿ ತಿಳಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು, ಬಂಧಿತರನ್ನು ಪ್ರದೀಪ್ ಪೂಜಾರಿ, ದಿನೇಶ್ ಬೆಳ್ಚಡ ಮತ್ತು ಶಿವಪ್ರಸಾದ್ ಎಂದು ಗುರುತಿಸಲಾಗಿದೆ.
ಈ ನಡುವೆ ರಾಜಕೀಯ ಒತ್ತಡದಿಂದಾಗಿ ಪೊಲೀಸರು ಈ ಪ್ರಕರಣವನ್ನು ದರೋಡೆಗೆ ಸಂಚು ಆರೋಪ ಎಂದು ಫಿಕ್ಸ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಂಧಿತರು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕಾಂಗ್ರೇಸ್ ಮುಖಂಡ ಮಿಥುನ್ ರೈ ಅವರ ಬೆಂಬಲಿಗರೆಂದು ಹೇಳಲಾಗಿದ್ದು, ಈ ಹಿನ್ನಲೆಯಲ್ಲಿ ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿ ಪ್ರಕರಣವನ್ನು ದರೋಡೆ ಸಂಚು ಎಂದು ಫಿಕ್ಸ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣ ರಾಜಕೀಯ ಬಣ್ಣ ಬರುವ ಸಾಧ್ಯತೆ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಡುವೆ ಪೊಲೀಸರು ಪ್ರಕರಣದ ಪ್ರಮುಖ ಸೂತ್ರಧಾರಿಗಳಾದ ನವೀನ್ ಕುಮಾರ್ ಕಟೀಲ್ ಮತ್ತು ಆಕಾಶ್ ಗಣಿಗ ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಈ ಪ್ರಕರಣ ಈಗ ಜಿಲ್ಲೆಯಾದ್ಯಂತ ಸದ್ದು ಮಾಡುತ್ತಿದ್ದು. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣಕ್ಕೆ ತಿರುವು ನೀಡಿದ್ದಾರೆ ಅನ್ನೋದಂತು ಸಂಚಲನ ಸೃಷ್ಟಿಸಿದೆ.
You must be logged in to post a comment Login