LATEST NEWS
ಉಡುಪಿ ಜಿಲ್ಲೆಯ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರಲು ಸೂಚನೆ
ಉಡುಪಿ ಜುಲೈ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಳಿಕ ಇದೀಗ ಉಡುಪಿ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ.
ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಕರಾವಳಿ ಬೆಚ್ಚಿ ಬಿದ್ದಿದ್ದು, ಈ ಹಿನ್ನಲೆ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ನಿಯಂತ್ರಿಸಲು ಹರಸಾಹಸಪಡುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಯ ಪ್ರಮುಖರು ಎಚ್ಚರದಿಂದರುವಂತೆ ಮತ್ತು ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್‌ಗಳಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಯಾವುದೆ ಮಾಹಿತಿ ಇದ್ದರೂ ಪೊಲೀಸ್ ಇಲಾಖೆಗೆ ನೀಡಬಹುದು ಎಂದು ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.