Connect with us

    LATEST NEWS

    ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಪೊಲೀಸರ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಮಾಡಿದೆ – ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್

    ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕೊರಗರ ಮೇಲಿನ ಪೊಲೀಸ್ ಹಲ್ಲೆ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿವರಣೆ ಕೇಳಿದೆ.


    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್, ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಪೊಲೀಸರ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಮಾಡುತ್ತದೆ.ಜನಸಾಮಾನ್ಯರನ್ನು ರಕ್ಷಿಸಬೇಕಾದ ಪೊಲೀಸರೇ ಈ ರೀತಿ ವರ್ತಿಸಿರುವುದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ವಿವರಣೆ ಕೇಳಿದ್ದೇವೆ. ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply