Connect with us

    LATEST NEWS

    ನೀಟ್ ಪರೀಕ್ಷೆ ಕೇಂದ್ರಕ್ಕೆ ಪ್ರವೇಶಿಸಲು ವಿಧ್ಯಾರ್ಥಿನಿಯರ ಒಳ ಉಡುಪು ತೆಗೆಯಲು ಹೇಳಿದ ಸಿಬ್ಬಂದಿ…ತನಿಖೆಗೆ ಆದೇಶ

    ಕೇರಳ ಜುಲೈ 19 : ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಕ್ಕೆ ಮೊದಲು ವಿಧ್ಯಾರ್ಥಿನಿಯರ ಒಳ ಉಡುಪುಗಳನ್ನು ತೆಗೆಸಿದಿ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾನವ ಹಕ್ಕುಗಳ ಆಯೋಗ ಕೊಲ್ಲಂ ಎಸ್ ಪಿ ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.


    ಸದ್ಯ ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. NEET ಪರೀಕ್ಷೆ ಬರೆದ ವಿಧ್ಯಾರ್ಥಿನಿಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದು, ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು ವಿವರಿಸಿದ್ದಾರೆ.

    ಪ್ರಾಥಮಿಕ ತಪಾಸಣೆಯ ನಂತರ, ಲೋಹ ಶೋಧಕದಿಂದ ಮಹಿಳೆಯರ ಒಳಉಡುಪಿನ ಕೊಕ್ಕೆ ಪತ್ತೆಯಾಯಿತು. ಈ ವೇಳೆ ಸಿಬ್ಬಂದಿ ಅದನ್ನು ತೆಗೆದುಹಾಕಲು ಕೇಳಿದರು. ಇದೇ ರೀತಿ ಸುಮಾರು 90 ಪ್ರತಿಶತ ಮಹಿಳಾ ಅಭ್ಯರ್ಥಿಗಳು ತಮ್ಮ ಒಳಉಡುಪುಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಹಾಕಬೇಕಾಯಿತು. ಇದಾದ ಬಳಿಕ ಪರೀಕ್ಷೆಯನ್ನು ನೀಡುವಾಗ ಅಭ್ಯರ್ಥಿಗಳು ಮಾನಸಿಕವಾಗಿ ತೊಂದರೆಗೀಡಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply