DAKSHINA KANNADA
ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯರ ಪತ್ತೆ ಪ್ರಕರಣ – ಹಿಂದೂ ಸಂಘಟನೆಗಳ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು
ಪುತ್ತೂರು ಅಗಸ್ಟ್ 27: ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳನ್ನು ತಡೆದು ಪೋಲೀಸರ ವಶಕ್ಕೆ ನೀಡಿದ್ದ ಸಂಘಟನೆಯ ಕಾರ್ಯಕರ್ತರ ವಿರುದ್ದ ವಿಧ್ಯಾರ್ಥಿನಿಯರು ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ವಿದ್ಯಾರ್ಥಿಗಳು ದೇವಸ್ಥಾನದ ಪರಿಸದಲ್ಲಿ ಫೋಟೋ ತೆಗೆದು ಮನೆಗೆ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರೆನ್ನಲಾದ ತಂಡವೊಂದು ಇವರನ್ನು ತಡೆದು ನಿಲ್ಲಿಸಿ ಪ್ರಶ್ನಿಸಿದೆ ಎನ್ನಲಾಗಿದೆ. ಹಿಂದೂ ಮತ್ತು ಮುಸ್ಲಿಮ್ ಧರ್ಮಕ್ಕೆ ಸೇರಿದ್ದ ವಿದ್ಯಾರ್ಥಿಗಳು ಇದ್ದಿದ್ದಕ್ಕೆ ಆಕ್ಷೇಪಿಸಿದ ತಂಡವು ಅವರನ್ನು ತರಾಟೆಗೈದಿದೆ ಎಂದು ದೂರಲಾಗಿದೆ.
ಸ್ಥಳಕ್ಕೆ ಬಂದ ಪುಂಜಾಲಕಟ್ಟೆ ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಹಿನ್ನಲೆಯಲ್ಲಿ ಮೂವರನ್ನು ವಶಕ್ಕೆ ಪಡೆದ ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.