ಮಹಿಳೆಯರ ರಕ್ಷಣೆಗೆ ಪಿಂಕ್ ವಾಟ್ಸಪ್ ಗ್ರೂಪ್ ರಚನೆ – ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ

ಮಂಗಳೂರು ಅಕ್ಟೋಬರ್ 10: ನಗರದಲ್ಲಿ ಮಹಿಳೆಯರು ವಿದ್ಯಾರ್ಥಿ ನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್ ಗ್ರೂಫ್ ಎಂಬ ವಾಟ್ಸಫ್ ಗ್ರೂಪ್ ಒಂದನ್ನು ರಚಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಡಾ.ಪಿ.ಎಸ್ .ಹರ್ಷ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ , ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗ ದೊಂದಿಗೆ ಬ್ರ್ಯಾಂಡ್ ಮಂಗಳೂರು ಕಾರ್ಯ ಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನದ ಕಾರ್ಯ ಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಯ ಭಾಗವಾಗಿ ಮೈಬೀಟ್ ಮೈ ಪ್ರೈಡ್ ಕಾರ್ಯ ಕ್ರಮ ವನ್ನು ಹಮ್ಮಿ ಕೊಳ್ಳಲಾಗಿದೆ. ಅದೇ ರೀತಿ ಮಹಿಳೆಯರು, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಠಿಯಿಂದ ಅವರ ನೆರವಿಗೆ ಮತ್ತು ಸಮಸ್ಯೆ ಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸಫ್ ಗ್ರೂಪ್ ನ್ನು ರಚಿಸಲಾಗುವುದು ಎಂದು ಡಾ.ಹರ್ಷ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗದಿರಬೇಕಾದರೆ. ತಮ್ಮ ಚಟುವಟಿಕೆಗಳನ್ನು ಮನಸ್ಸಿಗೆ ಮುದ ನೀಡುವ ಹವ್ಯಾಸ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿರು ನಮ್ಮ ಮಾಹಿತಿಗಳನ್ನು ಪಡೆದುಕೊಂಡು ನಮಗೆ ವಂಚಿಸುವ ಸಾಧ್ಯತೆಗಳ ಎಚ್ಚರವಹಿಸ ಬೇಕಾದ ಅಗತ್ಯವಿದೆ ಎಂದರು.

ವಿದ್ಯಾರ್ಥಿಗಳು ಸಂವಾದಗೋಷ್ಠಿ ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಮಾದಕ ವ್ಯಸನಕ್ಕೆ ಬಲಿಯಾದವರನ್ನು ಹೊರತರುವುದಕ್ಕೆ ಆಪ್ತ ಸಲಹೆ, ಕೆಲವೊಮ್ಮೆ ಅಮಲು ವ್ಯಸನದಿಂದ ಹೊರಬರಲು ಚಿಕಿತ್ಸೆಯ ಅಗತ್ಯವೂ ಕಂಡು ಬರಬಹುದು ಎಂದರು. ಸಮಾಜದಲ್ಲಿ ಅಪರಾಧ ಗಳನ್ನು ತಡೆಯಲು ಜವಾಬ್ದಾರಿಯುತ ನಾಗರಿಕರ ಪಾತ್ರವೂ ಮುಖ್ಯ. ಅಪರಾಧ ಸಂಭವಿಸಿದ ತಕ್ಷಣ ಈ ಬಗ್ಗೆ ಪೊಲೀಸರಿಗೆ ತಿಳಿಸುವ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮಾಹಿತಿ ನೀಡಿದಂತಾಗುತ್ತದೆ. ಅದಕ್ಕಾಗಿ ತುರ್ತು ಕರೆ,ವಾಟ್ಸಫ್, ಇ ಮೇಲ್ ಗಳನ್ನು ಬಳಸಬಹುದು ಎಂದು ಪೊಲೀಸ್ ಕಮೀಷನರ್ ಹರ್ಷ ತಿಳಿಸಿದ್ದಾರೆ.