LATEST NEWS
ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನಿಯುಕ್ತಿ
ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನಿಯುಕ್ತಿ
ಮಂಗಳೂರು ಅಗಸ್ಟ್ 1: ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸದ್ಯ ಮಂಗಳೂರು ಪೊಲೀಸ್ ಕಮಿಷನರ್ ಆಗಿರುವ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದ್ದು ಅವರ ಜಾಗಕ್ಕೆ ರಾಜ್ಯ ಗುಪ್ತಚರ ವಿಭಾಗದ ಡಿಐಜಿಯಾಗಿರುವ ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರನ್ನು ನಿಯುಕ್ತಿಗೊಳಿಸಿದೆ.
ಹಾಲಿ ಮಂಗಳೂರು ಪೊಲೀಸ್ ಆಯುಕ್ತರಾಗಿರುವ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಸಿಟಿಯ ಜಂಟಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರು ಪುತ್ತೂರು Asp ಯಾಗಿ ಕರ್ತವ್ಯ ಆರಂಭಿಸಿದ್ದರು, ನಂತರ ದಕ್ಷಿಣಕನ್ನಡ ಜಿಲ್ಲಾ ಎಸ್ ಪಿ ಯಾಗಿ ಕಾರ್ಯನಿರ್ವಹಿಸಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.