BELTHANGADI
ಮಹಾತ್ಮಾ ಗಾಂಧೀಜಿ ಕುರಿತ ಅವಹೇಳನ ರೀತಿಯಲ್ಲಿ ಭಾಷಣ – ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು
ಬೆಳ್ತಂಗಡಿ ಅಗಸ್ಟ್ 16: ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಹಾತ್ಮಾಗಾಂಧೀಜಿ ಕುರಿತು ಅವಮಾನ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕ್ರಮಕೈಗೊಳ್ಳಲು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಳ್ತಂಗಡಿ ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷ ನೆಲೆಯಲ್ಲಿ ಮಾತನಾಡುತ್ತಾ ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿ ಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ಭಾರತೀಯ ದೂರು ನೀಡಿದರು.
You must be logged in to post a comment Login