Connect with us

    DAKSHINA KANNADA

    ಲಾಡ್ಜ್ ಗೆ ದಾಳಿ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದೂರು – ಇಬ್ಬರು ಪೊಲೀಸ್ ವಶಕ್ಕೆ

    ಪುತ್ತೂರು ಸೆಪ್ಟೆಂಬರ್ 21: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಹೊಟೇಲ್ ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


    ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ತಂಗಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲಾಡ್ಜ್ ಗೆ ದಾಳಿ ನಡೆಸಿದ್ದರು. ಈ ಸಂದರ್ಭ ಯುವತಿ ಮತ್ತು ಇಬ್ಬರು ಯುವಕರು ಅಲ್ಲಿನ ರೆಸ್ಟೋರೆಂಟ್‌ನಲ್ಲಿ ಉಪಹಾರ ಸೇವಿಸುತ್ತಿದ್ದರು. ಕೂಡವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಹಾಗೂ ಪುರುಷರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.


    ಈ ನಡುವೆ ಲಾಡ್ಜ್ ಗೆ ದಾಳಿ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ನಗರ ಪೋಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಬೆಂಗಳೂರು ಮೂಲದ ರಾಜೇಶ್ವರಿ ದೂರು ದಾಖಲಿಸಿದ ಮಹಿಳೆಯಾಗಿದ್ದು, ಹಿಂದೂ ಸಂಘಟನೆಗಳು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಮಹಿಳೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಿದ್ದ ಇಬ್ಬರು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply