Connect with us

    LATEST NEWS

    ಅಪ್ರಾಪ್ತ ಬಾಲಕಿಗೆ ಮೊಬೈಲ್ ಸಂದೇಶ – ಪೊಲೀಸಪ್ಪನ ಮೇಲೆ ಪೊಕ್ಸೊ ಕೇಸ್

    ಮಂಗಳೂರು ಜುಲೈ 28: ದೂರು ನೀಡಲು ಹೋದಾಗ ಅಪ್ರಾಪ್ತ ಬಾಲಕಿಯ ಮೊಬೈಲ್ ನಂಬರ್ ಪಡೆದು ಬಳಿಕ ಅಸಭ್ಯವಾಗಿ ಬಾಲಕಿಯ ಜೊತೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.


    ಈ ಬಗ್ಗೆ ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದರು.

    ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನಿನ್ನೆಯೇ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply