BELTHANGADI
ಲಂಚ ಸ್ವೀಕಾರ ಸಾಬೀತು – ಬೆಳ್ತಂಗಡಿ ಠಾಣಾ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್‌ಗೆ 3 ವರ್ಷ ಶಿಕ್ಷೆ
ಬೆಳ್ತಂಗಡಿ : ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿಯಲ್ಲಿ 2011ರ ಜುಲೈ 7ರಂದು ಪ್ರಕರಣದ ಪಿರ್ಯಾದಿ ಫಾರೂಕ್ ಎಂಬವರಿಂದ ಎಫ್. ಐ. ಆರ್. ದಾಖಲಿಸಲು 1,000ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ದಿಲೀಪ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಪುತ್ತೂರು ಟೌನ್ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆರೋಪಿ ಪ್ರಕಾಶ್ ಎಸ್. ನನ್ನು ಬಂಧಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಲಂಚ ಸ್ವೀಕಾರ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆ ಆರೋಪಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದು, ಮೂರು ವರ್ಷ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದ್ದಾರೆ.
ಆರೋಪಿ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Facebook Comments
You may like
ನ್ಯಾಯಾಂಗದಲ್ಲಿ ಕಲ್ಲರಳಿ ಹೂವಾದ ಧರ್ಮಸ್ಥಳದ ಕುಮಾರಿ ಚೇತನಾ..!
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮನೆ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!
ಸನತ್ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ
ತಿಥಿ ದಿನ ಪ್ರತ್ಯಕ್ಷನಾದ ಮೃತ ವ್ಯಕ್ತಿ…ಸತ್ಯವಾದ ಜ್ಯೋತಿಷಿಯ ಮಾತು….!!
22 ದಿನಗಳ ನಂತರ ಸನತ್ ಶೆಟ್ಟಿ ಮೃತದೇಹ ಪತ್ತೆ
You must be logged in to post a comment Login