KARNATAKA
ಹಾಸನದಲ್ಲಿ ಹರಿದ ಖಾಕಿ ನೆತ್ತರು, ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಹತ್ಯೆ..!!
ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹಾಸನ: ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ, ಹರೀಶ್ ಅವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಇದೇ ನವೆಂಬರ್ 11 ಕ್ಕೆ ಹರೀಶ್ ಅವರ ವಿವಾಹ ಕೂಡ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಡಾಬಾ ಸರ್ಕಲ್‌ನಲ್ಲಿ ಈ ಕೃತ್ಯ ಎಸಗಲಾಗಿದೆ.
ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.