LATEST NEWS
ಆದಿಉಡುಪಿ -ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಉಡುಪಿ ಎಪ್ರಿಲ್ 29: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ,.
ಮೃತರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು ಎಸ್ಎಸ್ ಎಲ್ ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
