LATEST NEWS
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಕಂಕನಾಡಿ ಠಾಣೆಯ ಕಾನ್ಸ್ ಟೇಬಲ್ ಹರೀಶ್ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಮಂಗಳೂರು, ಫೆಬ್ರವರಿ 9: ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆಗೆ ಊರಿಗೆ ತೆರಳಿದ್ದ ಅವರು ಬುಧವಾರ ವಾಪಾಸ್ ಬರುವ ಸಂದರ್ಭ ಸುಳ್ಯದಲ್ಲಿ ಅಪಘಾತಕ್ಕೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)