Connect with us

    KARNATAKA

    ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಮಂಜುಶ್ರೀ

    ಹಾರೋಹಳ್ಳಿ ಫೆಬ್ರವರಿ 17 : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.


    ಬೆಂಗಳೂರು ನಗರದ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ತಾಲ್ಲೂಕಿನ ದ್ಯಾವಸಂದ್ರದ ಮಂಜುಶ್ರೀ (27) ಅವರು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಮಂಜುಶ್ರೀ ಅವರು ಇತ್ತೀಚೆಗೆ ಶಿವಾಜಿನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ದ್ಯಾವಸಂದ್ರ ಗ್ರಾಮಕ್ಕೆ ಬಂದಿದ್ದ ಅವರು, ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.
    ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply