KARNATAKA
ಬೀದರ್ : ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ- ಪ್ರೇಮ ವೈಫಲ್ಯ ಶಂಕೆ..!

ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದ್ದು ಪ್ರೇಮ ವೈಫಲ್ಯದ ಶಂಕೆ ವ್ಯಕ್ತವಾಗಿದೆ.
.
ಬೀದರ್: ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದ್ದು ಪ್ರೇಮ ವೈಫಲ್ಯದ ಶಂಕೆ ವ್ಯಕ್ತವಾಗಿದೆ.

ಉಮೇಶ್ ನಾಯ್ಕ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದಾರೆ .
ಮೂಲತಃ ವಿಜಯನಗರ ಜಿಲ್ಲೆಯವರಾಗಿದ್ದ ಉಮೇಶ್ 2021ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಯ್ಕೆಯಾಗಿದ್ದರು.
ಅವರು ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಉಮೇಶ್ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದ ಪೋಷಕರು ಬೀದರ್ಗೆ ಆಗಮಿಸಿದ್ದಾರೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.