LATEST NEWS
ಮಾಹಿತಿ ಮುಚ್ಚಿಟ್ಟ ಆರೋಪ ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಮಾಹಿತಿ ಮುಚ್ಚಿಟ್ಟ ಆರೋಪ ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಮಂಗಳೂರು ಜೂನ್ 8: ಅಕ್ರಮ ಮರಳು ದಾಸ್ತಾನು ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪದ ಮೇಲೆ ಬಜ್ಪೆ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಪೊಲೀಸ್ ಕಾನ್ಸ್ ಟೇಬಲ್ ಮಂಜುನಾಥ್, ಲಕ್ಷ್ಮಣ್, ಹೆಡ್ ಕಾನ್ಸ್ ಟೇಬಲ್ ಚಂದ್ರಮೋಹನ್ ಅಮನಾತಾದ ಪೊಲೀಸ್ ಸಿಬ್ಬಂದಿಗಳು ಇವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಮಂಗಳೂರಿನ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಾಸ್ತಾನು ಕೇಂದ್ರದ ಮೇಲೆ ಬೃಹತ್ ಕಾರ್ಯಾಚರಣೆ ನಡೆದಿತ್ತು. ಭೂವಿಜ್ಞಾನ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಪ್ರಮಾಣದ ಮರಳನ್ನು ವಶಕ್ಕೆ ಪಡೆದಿದ್ದರು.
ಬಡಗುಳಿಪಾಡಿ, ನಾರ್ಲಪದವು, ಮೂಡುಪೆರಾರ ಬಳಿ 853 ಲೋಡ್ ಮರಳು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಅಕ್ರಮ ದಾಸ್ತಾನಿನ ಬಗ್ಗೆ ಮಾಹಿತಿ ಇದ್ದರೂ ಮುಚ್ಚಿಟ್ಟ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಸೂಚನೆಯಡಿ ಅಮಾನತು ಮಾಡಲಾಗಿದೆ.