LATEST NEWS
ನಿಯಂತ್ರಣಕ್ಕೆ ಬಾರದ ಸಿರ್ಸಿ ಗಲಭೆ -ಅಶ್ರುವಾಯು ಪ್ರಯೋಗಿಸಿದ ಪೊಲೀಸರು
ನಿಯಂತ್ರಣಕ್ಕೆ ಬಾರದ ಸಿರ್ಸಿ ಗಲಭೆ -ಅಶ್ರುವಾಯು ಪ್ರಯೋಗಿಸಿದ ಪೊಲೀಸರು
ಕಾರವಾರ ಡಿಸೆಂಬರ್ 12: ಪರೇಶ್ ಮೇಸ್ತ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಪರೇಶ್ ಮೇಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಿರ್ಸಿ ಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉಗ್ರ ರೂಪ ತಾಳಿದ್ದು , ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ಸಿರ್ಸಿಯ ವಿವಿದೆಡೆಗಳಲ್ಲಿ ಘರ್ಷಣೆ ಮುಂದುವರೆದಿದೆ. ಒಂದೆಡೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದರೆ ಇನ್ನೊಂದೆಡೆ ಸದಾನಂದ ಗಲ್ಲಿ ವೃತ್ತದ ಬಳಿ ಅನ್ಯಕೋಮಿನ ಯುವಕರ ಗುಂಪಿನ ನಡುವೆ ಘರ್ಷಣೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಸಿರ್ಸಿಯಾದ್ಯಂತ ಉದ್ವಿಘ್ನ ಪರಿಸ್ಥಿತಿ ನೆಲೆಸಿದ್ದು ಪೊಲೀಸರು ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾಗಿ ಕೈಚೆಲ್ಲಿ ಕುಳಿತಿದ್ದಾರೆ. ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ತಿರುಗುವ ಎಲ್ಲಾ ಸಾಧ್ಯತೆ ಕಂಡು ಬರುತ್ತಿದೆ.
ಸಿರ್ಸಿಯಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿರುವ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಭದ್ರತೆಗಾಗಿ 5 ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಕರೆಸಲಾಗಿದೆ.
ಧಾರವಾಡ, ರಾಮನಗರ, ಮಂಡ್ಯ, ಬಳ್ಳಾರಿ, ಉಡುಪಿ, ಬೆಂಗಳೂರು ಜಿಲ್ಲೆಗಳಿಂದ ಪೊಲೀಸ್ ತುಕಡಿಗಳನ್ನು ಭದ್ರತೆಗೆ ಸಿರ್ಸಿಗೆ ಕರೆಸಲಾಗಿದೆ. ಕೆಎಸ್ಆರ್ ಪಿ , ಸಿವಿಲ್ ಸೇರಿದಂತೆ 1500 ಕ್ಕೂ ಹೆಚ್ಚು ಪೊಲೀಸರು ಈ ಮೊದಲೇ ಸಿರ್ಸಿಯಲ್ಲಿ ಬಿಡು ಬಿಟ್ಟಿದ್ದಾರೆ.