LATEST NEWS
ಮಂಗಳೂರು – ಕೊಲೆ ಆರೋಪಿಗಳ ಬಂಧನ ವೇಳೆ ಹಲ್ಲೆ..ಪೊಲೀಸರಿಂದ ಪೈರಿಂಗ್

ಮಂಗಳೂರು ಜೂನ್ 11: ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಅವರನ್ನು ಬಂಧಿಸಲು ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಲೇಔಟ್ ಬಳಿ ತೆರಳಿದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ, ಈ ಸಂದರ್ಭ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ರಾಘವೇಂದ್ರ ಕೊಲೆ ಪ್ರಕರಣದ ಸಂಬಂಧ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ನಡೆಸಿದ್ದು, ಗಾಳಿಯಲ್ಲಿ ಒಂದು ಸುತ್ತು ಹಾರಿಸಿದ್ದು ಹಾಗೂ ಆರೋಪಿಗಳ ಕಾಲಿಗೆ ಎರಡು ಗುಂಡೇಟು ಬಿದ್ದಿದೆ.
ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಪಿಎಸ್‌ಐ ನಾಗೇಂದ್ರ, ಎಎಚ್‌ಸಿ ಸಂತೋಷ್ ಪೂಜಾರಿ ಮತ್ತು ಎಎಸ್‌ಐ ಡೇವಿಡ್ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಆರೋಪಿಗಳು ಹಾಗೂ ಪೊಲೀಸರನ್ನು ನಗರದ ಮುಕ್ಕದಲ್ಲಿರುವ ಶ್ರೀನಿವಾಸ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.