LATEST NEWS
ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್….!!

ಮಂಗಳೂರು ಜುಲೈ 17: ಪ್ರಕರಣವೊಂದರ ತನಿಖೆಗಾಗಿ ಆರೋಪಿಯನ್ನು ಕರೆದೊಯ್ಯುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಾರಿಯಾಗಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಪೈರಿಂಗ್ ಮಾಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ.
ರೌಡಿ ಶೀಟರ್ ಮುಕ್ತಾರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ಮುಕ್ತಾರ್ ನನ್ನು ಪೊಲೀಸರು ಬಂಧಿಸಿದ್ದರು. ಬಂಧನದ ನಂತರ ಮಹಜರು ಮಾಡಲು ಆರೋಪಿಯನ್ನು ಕೊಣಾಜೆ ಬಳಿಯ ಅಸೈಗೋಳಿಗೆ ಕರೆದೊಯ್ದಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಸಂದೀಪ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಪೊಲೀಸ್ ಸಿಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
