Connect with us

LATEST NEWS

ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಒರ್ವನ ಬಂಧನ

ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಒರ್ವನ ಬಂಧನ

ಮಂಗಳೂರು ಅಕ್ಟೋಬರ್ 17: ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂದಿಸಿದ್ದಾರೆ.

ಕಂಕನಾಡಿ ,ಪಂಪ್ ವೆಲ್ ವೃತ್ತ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವೃತ್ತಿಯಲ್ಲಿ ಕಂಡೆಕ್ಟರ್ ಆಗಿರುವ ಬಂಟ್ವಾಳದ ಮೊಹಮ್ಮದ್ ಇಝುದ್ದೀನ್ (32), ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ 200 ಗ್ರಾಂ ಗಾಂಜಾ ವಶಪಡಿಸಿ ಕೊಳ್ಳಲಾಗಿದೆ. ಗಾಂಜಾವನ್ನು ಆರೋಪಿ ಕೇರಳದ ಕುಂಜತ್ತೂರು ಬಳಿಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ.

Facebook Comments

comments