LATEST NEWS
ಹೃದಯಾಘಾತದಿಂದ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ನಿಧನ

ಹೃದಯಾಘಾತದಿಂದ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ನಿಧನ
ಉಡುಪಿ ಅಕ್ಟೋಬರ್ 3: ಹೆಜಮಾಡಿಯ ಕರಾವಳಿ ಕಾವಲು ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಹರಿಶ್ಟಂದ್ರ ಕೆ.ಪಿ ಹೃದಯಾಘಾತದಿಂದ ಬುಧವಾರ ನಿಧನಹೊಂದಿದ್ದಾರೆ.
ಕಳೆದ ಎರಡೂವರೆ ವರ್ಷಗಳಿಂದ ಹೆಜಮಾಡಿಯ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರಿಗೆ 54 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು ಬೆಳಿಗ್ಗೆ ಅವರ ಮುಲ್ಕಿಯ ಕೊಲ್ನಾಡುವಿನಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿತ್ತು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.