Connect with us

    DAKSHINA KANNADA

    ಪೊಲೀಸ್ ಅಧಿಕಾರಿ ನನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ರು: ಮಂಗಳಮುಖಿ ಗಂಭೀರ ಆರೋಪ

    ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತೆಯೊಬ್ಬರು, ಪೊಲೀಸ್‌ ಹಿರಿಯ ಅಧಿಕಾರಿಯೊಬ್ಬರು ರಾತ್ರಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ಈ ರೀತಿ ವರ್ತಿಸಿದಾಗ ನಾವು ಏನು ಮಾಡುವುದು? ಯಾರಿಗೆ ದೂರು ನೀಡುವುದು ಎಂದು ನಾಗರಿಕ ಸಮಾಜದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ನ್ಯಾಯಾಧೀಶರ ಮುಂದೆ ವ್ಯಕ್ತಪಡಿಸಿದ್ದರು.

    ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಗಳಮುಖಿ ನಿಖಿಲಾ, ಮಂಗಳೂರಿನಲ್ಲಿ ರಾತ್ರಿ ವೇಳೆ ಸಿಂಗಲ್ ಸ್ಟಾರ್ ಪೊಲೀಸ್ ಅಧಿಕಾರಿ ನನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದರು. ಹಣ ಕೊಡುತ್ತೇನೆ ಬಾ ಎಂದು ಕರೆದರು. ಯೂನಿರ್ಫಾಮ್ ಹಾಕಿದ್ದೀರಾ ಅಲ್ವಾ ಅದನ್ನು ಕಳಚಿ ಬನ್ನಿ ಎಂದು ಹೇಳಿದ್ದೆ. ಇದೇ ವಿಚಾರವನ್ನು ನಾನು ಸಭೆಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

    ನ್ಯಾಯಾಧೀಶರ ಮುಂದೆ ಹೇಳಿಕೆ ಬಳಿಕ ನಿನ್ನೆ ಪೊಲೀಸ್ ಅಧಿಕಾರಿಗಳು ನನ್ನನ್ನು ಕಮೀಷನರ್ ಕಚೇರಿಗೆ ಕರೆದಿದ್ದರು. ನನ್ನ ಹೇಳಿಕೆಗಳನ್ನು ಪಡೆದು ದೂರು ಕೊಡಿ ಎಂದು ಹೇಳಿದ್ದಾರೆ. ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಲಿಂಗತ್ವ ಅಲ್ಪಸಂಖ್ಯಾತೆ ನಿಖಿಲಾ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply