LATEST NEWS
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗಲೇ ಕುಸಿದು ಬಿದ್ದು ಸಾವನಪ್ಪಿದ ಪೊಲೀಸ್ ಅಧಿಕಾರಿ

ಮಂಗಳೂರು: ಮಂಗಳೂರು ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ ಮಾದರ(37) ಸಾವನಪ್ಪಿರುವ ಅಧಿಕಾರಿ.
ಮೂಲತಃ ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ 4 ಗಂಟೆಯ ವೇಳೆಗೆ ಪಾಂಡೇಶ್ವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ಕಛೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೊಗುತ್ತಿದ್ದಾಗ ಎ.ಬಿ . ಶೆಟ್ಟಿ ಸರ್ಕಲ್ ಬಳಿ ಅಸ್ವಸ್ತಗೊಂಡು ಕುಸಿದು ಬಿದ್ದದ್ದಿದ್ದಾರೆ. ತಕ್ಷಣ ಅವರನ್ನು ಆ್ಯಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ್ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
