Connect with us

LATEST NEWS

ಉಳ್ಳಾಲ – ವೇಶ್ಯಾವಾಟಿಕೆ ಅಡ್ಡೆಗೆ ಮೇಲೆ ಪೊಲೀಸ್ ದಾಳಿ ಕಿಂಗ್ ಪಿನ್ ಮಹಿಳೆ ಅರೆಸ್ಟ್….!!

ಉಳ್ಳಾಲ ಮಾರ್ಚ್ 08: ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯ ಕಿಂಗ್ ಪಿನ್ ಮಹಿಳೆಯನ್ನು ಬಂಧಿಸಿದ್ದಾರೆ.


ಬಂಧಿತಳನ್ನು ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ ರುಕಿಯಾ (50) ಎಂದು ಗುರುತಿಸಲಾಗಿದ್ದು. ಈಕೆ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾ ವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ.ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ.ಪ್ರಮುಖ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು,9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

Advertisement
Click to comment

You must be logged in to post a comment Login

Leave a Reply