Connect with us

DAKSHINA KANNADA

ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಅಕ್ರಮ ಮದ್ಯ ವಶಕ್ಕೆ…ಆರೋಪಿ ಪರಾರಿ

ಪುತ್ತೂರು ಜೂನ್ 02: ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 42 ಸಾವಿರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ.


ಖಚಿ ಮಾಹಿತಿ ಮೇರೆಗೆ ದಾಳಿ ನಡೆಸಿದ ಪುಂಜಾಲಕಟ್ಟೆ ಠಾಣಾ ಸಿಬ್ಬಂದಿ ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ಕಾಣೇಲುವಿನ ಭೋಜ ಪೂಜಾರಿ ಅವರ ನಿವಾಸದಿಂದ ವಿವಿಧ ನಮೂನೆಯ 42,000 ರೂ. ಮೌಲ್ಯದ 82.53 ಲೀಟರ್ ಮದ್ಯ ಮತ್ತು 58.68 ಲೀಟರ್ ಬಿಯರ್ ಹಾಗೂ 14,125 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ ಸೆಕ್ಷನ್ 32 ಮತ್ತು 34 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.