DAKSHINA KANNADA
ಪುತ್ತೂರು -ಕಟ್ಟಡವೊಂದರಲ್ಲಿ ವೈಶ್ಯಾವಾಟಿಕೆ ಆರೋಪ – ಇಬ್ಬರು ಅರೆಸ್ಟ್

ಪುತ್ತೂರು ಜುಲೈ 02: ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಪುತ್ತೂರಿನ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.
ಸಾಮೆತ್ತಡ್ಕ ನಿವಾಸಿ ವಿಲೈಡ್ ಎಂಬಾತ ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
