LATEST NEWS
ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಕೋಟೆಕಾರು ಬ್ಯಾಂಕ್ ದರೋಡೆಕೋರನ ಮೇಲೆ ಫೈರಿಂಗ್
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆಸಿ ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡ ಹೋಗಲು ಯತ್ನಿಸಿದ್ದಾನೆ.
ಈ ವೇಳೆ ಅಲ್ಲೆ ಬಿದ್ದಿದ್ದ ಬಿಯರ್ ಬಾಟಲಿಯನ್ನು ಎತ್ತಿಕೊಂಡ ಆರೋಪಿ ಸಿಸಿಬಿ ಸಿಬ್ಬಂದಿ ಅಂಜನಪ್ಪ ಹಾಗೂ ಉಳ್ಳಾಲ ಠಾಣೆ ಸಿಬ್ಬಂದಿ ನಿತಿನ್ ಮೇಲೆ ದಾಳಿ ನಡೆಸಿದ್ದಾನೆ. ಅಲ್ಲದೆ ಹಲ್ಲೆ ತಡೆಯಲು ಬಂದ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಮೇಲೂ ದಾಳಿ ಮಾಡಿದ್ದಾನೆ, ಈ ವೇಳೆ ಸ್ಥಳದಲ್ಲೇ ಇದ್ದ ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್ ಕಣ್ಣನ್ ಗೆ ವಾರ್ನಿಂಗ್ ಫೈರ್ ಮಾಡಿದ್ದಾರೆ. ಆದರೂ ಆತ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್ ಕಣ್ಣನ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಗೊಂಡ ಕಣ್ಣನ್ ಮಣಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧಿಸಿ ಮುರುಗಂಡಿ ದೇವರ್, ಕಣ್ಣನ್ ಮಣಿ ಮತ್ತು ಯೋಶುವಾ ರಾಜೇಂದ್ರನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ತಮಿಳುನಾಡಿನ ಸ್ಥಳೀಯ ಕೋರ್ಟಿನಲ್ಲಿ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.