Connect with us

    LATEST NEWS

    ಕಾಂಗ್ರೇಸ್ ಪಕ್ಷದ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ತನಿಖೆ ಆರಂಭಿಸಿದ ಪೊಲೀಸರು

    ಕಾಂಗ್ರೇಸ್ ಪಕ್ಷದ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ತನಿಖೆ ಆರಂಭಿಸಿದ ಪೊಲೀಸರು

    ಮಂಗಳೂರು, ಮೇ 20: ಮಂಗಳೂರಿನಲ್ಲಿ ಮೇ 19 ರಂದು ನಡೆದ ಕಾಂಗ್ರೇಸ್ ಪಕ್ಷದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಸಂಬಂಧಿಸಿದಂತೆ ಮಂಗಳೂರು ಪೋಲೀಸರು ತನಿಖೆ ಆರಂಭಿಸಿದ್ದಾರೆ‌.

    ಈಗಾಗಲೇ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೋವನ್ನು ಮಂಗಳೂರು ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ವಿಡಿಯೋದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ದೃಡಪಟ್ಟಿರುವ ಹಿನ್ನೆಲೆಯಲ್ಲಿ ಇದರ ಹಿಂದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮಂಗಳೂರು ಪೋಲೀಸರು ಮುಂದಾಗಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಹಾಗೂ ಕಾಂಗ್ರೇಸ್ ಹಾಗೂ ಜೆಡಿಎಸ್ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೇಸ್ ಪಕ್ಷ ಈ ವಿಜಯೋತ್ಸವವನ್ನು ನಡೆಸಿತ್ತು. ಮಾಜಿ ಶಾಸಕ ಜೆ.ಆರ್.ಲೋಬೋ ಈ ವಿಜಯೋತ್ಸವದ ನೇತೃತ್ವದಲ್ಲಿ ಈ ವಿಜಯೋತ್ಸವ ನಡೆದಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply