DAKSHINA KANNADA
ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಸಸ್ಪೆಂಡ್

ಮಂಗಳೂರು ಡಿಸೆಂಬರ್ 12: ಯುವ ವಕೀಲ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ವಕೀಲರು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದ್ದರು.
ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಎಸ್ಸೈ ಸುತೇಶ್ ಅವರನ್ನು ದ.ಕ.ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಕೀಲರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಅಲ್ಲದೆ ರಾಜ್ಯ ಗೃಹ ಸಚಿವರಿಗೂ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಆ ಹಿನ್ನಲೆಯಲ್ಲಿ ಎಸ್ಸೈ ಸುತೇಶ್ ಅವರನ್ನು ಪಶ್ಚಿಮ ವಲಯದ ಡಿಐಜಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
