ದೇರಳಕಟ್ಟೆ ಚೂರಿ ಇರಿತ ಪ್ರಕರಣ ಆರೋಪಿ ಸುಶಾಂತ್ ಪೊಲೀಸ್ ವಶಕ್ಕೆ

ಮಂಗಳೂರು ಜುಲೈ 3: ಜೂನ್ 28 ರಂದು ದೇರಳಕಟ್ಟೆ ಬಗಂಬಿಲ ಬಳಿ ಯುವತಿ ಚೂರಿ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ರೌಡಿ ಶೀಟರ್ ಆರೋಪಿ ಸುಶಾಂತ್ ನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆರೋಪಿ ಸುಶಾಂತ್ ದೀಕ್ಷಾಳಿಗೆ 12 ಬಾರಿ ಚೂರಿ ಇರಿದು ತಾನು ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಕಳೆದ ನಾಲ್ಕು ದಿನಗಳಿಂದ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪೊಲೀಸ್ ಸುಪರ್ದಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಶಾಂತ್ ಸಂಪೂರ್ಣ ಗುಣಮುಖನಾಗಿದ್ದು ಗಾಯಗಳಿಗೆ ಹಾಕಲಾಗಿದ್ದ ಬ್ಯಾಂಡೇಜ್ ನ್ನು ತೆಗೆಯಲಾಗಿದೆ. ಆರೋಪಿ ಗುಣಮುಖನಾದ ಹಿನ್ನಲೆಯಲ್ಲಿ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರಿಗೆ ಆರೋಪಿ ವಿಚಾರಣೆ ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸುವ ಸಾಧ್ಯತೆ ಇದೆ.

ಸುಶಾಂತ್ ನಿಂದ ಚೂರಿ ಇರಿತಕ್ಕೊಳಗಾಗಿದ್ದ ದೀಕ್ಷಾ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದು, ಸ್ವಲ್ಪ ಮಟ್ಟಿನ ಚೆತರಿಕೆ ಮಾತ್ರ ಇದ್ದು, ಆಕೆಯ ಕಿಡ್ನಿಗೆ ಹಾನಿಯಾಗಿರುವುದರಿಂದ ರಕ್ತಹೆಪ್ಪುಗಟ್ಟಿದ್ದು ಪ್ರಥಮ ಹಂತದ ಚಿಕಿತ್ಸೆ ನೀಡಲಾಗುತ್ತಿದೆ.

ಕಿಡ್ನಿ ಸಮಸ್ಯೆ ಪರಿಹಾರಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಿದ್ದು, ದೀಕ್ಷಾ ನಿಧಾನವಾಗಿ ಚೇತರಿಸಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Facebook Comments

comments