LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶೇಕಡ 77.63 ರಷ್ಟು ಮತದಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶೇಕಡ 77.63 ರಷ್ಟು ಮತದಾನ
ಮಂಗಳೂರು ಮೇ 13: ದೇಶದಾದ್ಯಂತ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಶೇಕಡ 70 ರಷ್ಟು ಮತದಾನವಾಗಿದೆ.
224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣಕನ್ನಡ ದಲ್ಲೂ ಮತದಾನ ಶಾಂತಿಯುತವಾಗಿ ನಡೆದಿದೆ.

ರಾಜ್ಯದಲ್ಲಿ ಶೇಕಡವಾರು ಮತದಾನದಲ್ಲಿ ಅಂತಹ ಏರಿಳಿತವಾಗದಿದ್ದರೂ ಕರಾವಳಿಯಲ್ಲಿ ಮಾತ್ರ ಶೇಕಡ 3 ರಷ್ಟು ಮತದಾನ ಹೆಚ್ಚಳವಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶೇಕಡ 77.63, ಉಡುಪಿ ಜಿಲ್ಲೆಯಲ್ಲಿ ಶೇಕಡ 78.87 ಮತದಾನವಾಗಿದೆ. 2013ರಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶೇಕಡ 74.48 ರಷ್ಟು ಮತದಾನವಾಗಿದ್ದರೆ, ಉಡುಪಿಯಲ್ಲಿ ಶೇಕಡ 75.6 ರಷ್ಟು ಮತದಾನವಾಗಿದೆ.
ನಕ್ಸಲ್ ಪೀಡಿತ ಪ್ರದೇಶ ಸಹಿತ ಕರಾವಳಿಯಾದ್ಯಂತ ಮತದಾನ ಶಾಂತಿಯುತವಾಗಿತ್ತು.