Connect with us

LATEST NEWS

ಪೋಲಿಯೊ ನಿರ್ಲಕ್ಷ ಬೇಡ- ಪ್ರಮೋದ್ ಮಧ್ವರಾಜ್

ಪೋಲಿಯೊ ನಿರ್ಲಕ್ಷ ಬೇಡ- ಪ್ರಮೋದ್ ಮಧ್ವರಾಜ್

ಉಡುಪಿ ಜನವರಿ 28: ದೇಶದಲ್ಲಿ ಪೋಲಿಯೊ ಪ್ರಕರಣಗಳು ಸದ್ಯದಲ್ಲಿ ಶೂನ್ಯ ಪ್ರಮಾಣದಲ್ಲಿದೆ ಆದರೆ ಪೋಲಿಯೋ ರೋಗ ವಿಶ್ವದಿಂದ ನಿರ್ಮೂಲನೆ ಆಗುವ ವರೆಗೂ, ಪೋಲಿಯೋ ವಿರುದ್ದದ ಹೋರಾಟ ನಿರಂತರವಾಗಿ ನಡೆಯಲಿದ್ದು, ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ನೀಡದಿದ್ದರೂ ಪೋಲಿಯೊ ಬರುವುದಿಲ್ಲ ಎಂಬ ನಿರ್ಲಕ್ಷ ತೋರದೆ, 0-5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ ಎಂದು ರಾಜ್ಯದ ಮೀನುಗಾರಿಕೆ, ಯುವಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಭಾನುವಾರ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಉಡುಪಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 82872 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಿದ್ದು, ಇದಕ್ಕಾಗಿ 670 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ, 2695 ಸ್ವಯಂ ಸೇವಕರು ಕರ್ತವ್ಯ ನಿರ್ವಹಿಸಲಿದ್ದಾರೆ , ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲದ ದಾಖಲೆ ಇದ್ದು, ಇದು ಹೀಗೆ ಮುಂದುವರೆಯಲಿ ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆಯಲ್ಲಿ ರೋಟರಿ ಮತ್ತು ಲಯನ್ಸ್ ಕ್ಲಬ್ ಗಳ ಸಹಕಾರ ನಿರಂತರವಾಗಿರಲಿ ಎಂದು ಸಚಿವರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *