Connect with us

    LATEST NEWS

    ರಾಜಕೀಯ ಘರ್ಷಣೆಯಾಗುವ ಆತಂಕ ಮಂಗಳೂರಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ

    ರಾಜಕೀಯ ಘರ್ಷಣೆಯಾಗುವ ಆತಂಕ ಮಂಗಳೂರಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ

    ಮಂಗಳೂರು ಮೇ 18: ನಾಳೆ ರಾಜ್ಯದಲ್ಲಿ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಸಂದರ್ಭ ಮಂಗಳೂರಿನಲ್ಲಿ ರಾಜಕೀಯ ಘರ್ಷಣೆಯಾಗುವ ಆತಂಕದ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಮಂಗಳೂರು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಈ ಆದೇಶ ಹೊರಡಿಸಿದ್ದು, ನಾಳೆ ಮುಂಜಾನೆ 8 ಗಂಟೆಯಿಂದ ಮೇ 20 ಬೆಳಿಗ್ಗೆ 10 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

    ವಿಧಾನ ಸೌಧದಲ್ಲಿ ನಾಳೆ ಬಿಜೆಪಿ ಕಾಂಗ್ರೇಸ್ ಹಾಗೂ ಜೆಡಿಎಸ್ ವಿಶ್ವಾಸ ಮತ ಪರೀಕ್ಷೆಗೆ ಒಳಪಡಲಿವೆ. ಈ ಕುರಿತು ಈಗಾಗಲೇ ರಾಜ್ಯಾದ್ಯಂತ ಪರ ವಿರೋಧ ಚರ್ಚೆ ಅನಿಸಿಕೆಗಳು ವ್ಯಕ್ತವಾಗುತ್ತಿವೆ. ಈ ಕಾರಣ ಮಂಗಳೂರಿನಲ್ಲಿಯೂ ರಾಜಕೀಯ ಘರ್ಷಣೆ ನಡೆಯುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ನಿಷೇಧಾಜ್ಞೆ ಅನ್ವಯ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ , ಕೆರಿಗಳಲ್ಲಿ , ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಟ್ಟಡ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

    ಯಾವುದೇ ರೀತಿಯ ವಿಜಯೋತ್ಸವ ಸಾರ್ವಜನಿಕ ಮೆರವಣಿಗೆ , ರಾಜಕೀಯ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವುದು , ಅಥವಾ ಇನ್ನಿತರ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಅಥವಾ ಹೊಂದಿರುವುದನ್ನು ನಿಷೇಧಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply